Index   ವಚನ - 160    Search  
 
ಏನನೋದಿ ಏನ ಕೇಳಿ ಏನ ಹೇಳಿದಡೆ ಏನು ಫಲ ತನ್ನಲ್ಲಿದ್ದ ವಸ್ತುವ ತಾನರಿಯದನ್ನಕ್ಕ? ಚಿನ್ನದ ತೊಡಹದ ತಾಮ್ರದಂತೆ ಒಳಗೆ ಕಾಳಿಕೆ ಬಿಡದು. ನುಣ್ಣಗೆ ಬಣ್ಣಗೆ ನುಡಿವ ಅಣ್ಣಗಳೆಲ್ಲರು ಕಣ್ಣು ಕಾಣದೇ ಕಾಡಬಿದ್ದರು. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ, ನಿಮ್ಮನರಿಯದ ಅಂಧಕರೆಲ್ಲರು.