ಅಂಧಕನ ಮುಂದೆ ನೃತ್ಯ ಬಹುರೂಪವನಾಡಿದಡೇನು
ಕಂಡು ಪರಿಣಾಮಿಸಬಲ್ಲನೆ ಹೇಳ?
ಬಧಿರನ ಮುಂದೆ ಸಂಗೀತ ಸಾಹಿತ್ಯವನೋದಿದಡೇನು
ಕೇಳಿ ತಿಳಿದು ಪರಿಣಾಮಿಸಬಲ್ಲನೆ ಹೇಳ?
ಜ್ಞಾನಾನುಭಾವವಿಲ್ಲದವರು
ಏನನೋದಿ ಏನ ಕೇಳಿ ಏನು?
ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನನರಿಯದವರ ಓದು ಕೇಳಿಕೆ,
ಬಧಿರಾಂಧಕರ ಕೇಳಿಕೆ ನೋಟದಂತಾಗಿತ್ತು.