Index   ವಚನ - 171    Search  
 
ಲಿಂಗವೆಂಬುದು ಸರ್ವಕಾರಣ ಪರಮ ನಿರ್ಮಲ. ಲಿಂಗವೆಂಬುದು ಸಚ್ಚಿದಾನಂದ ನಿತ್ಯಪರಿಪೂರ್ಣ. ಲಿಂಗವೆಂಬುದು ಸರ್ವಲೋಕೋತ್ಪತ್ತಿಗೆ ಮೂಲಕಾರಣ. ಲಿಂಗವೆಂಬುದು ಜನ್ಮವಾರಿಧಿಯ ದಾಂಟಿಸುವ ಭೈತ್ರವು. ಲಿಂಗವೆಂಬುದು ಶರಣರ ಹೃದಯದಲ್ಲಿ ಬೆಳಗುವ ಜ್ಯೋತಿರ್ಮಯ ಲಿಂಗವು. ಇಂತೀ ಲಿಂಗದ ಮರ್ಮವನರಿದವನೇ ಅರಿದವನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.