Index   ವಚನ - 200    Search  
 
ನಾ ಬಲ್ಲೆ ತಾಬಲ್ಲೆನೆಂಬುವರೆಲ್ಲ ಅಲ್ಲ ಅಹುದೆಂಬ ಗೆಲ್ಲ ಸೋಲದ ಮಾತ ಕಲಿತು ಆಡುವರಲ್ಲದೆ ಅದನಾರು ಮೆಚ್ಚುವರು? ಕಾಲೂರಿ ಒಂದೆರಡು ಯೋಜನ ನಡೆಯಬಹುದಲ್ಲದೆ ತಲೆಯೂರಿ ನಡೆಯಬಹುದೆ? ನೆಲೆಯರಿಯದ ಮಾತ ಹಲವ ನುಡಿದಡೇನು ಫಲ? ನೆಲಯರಿದ ಮಾತೊಂದೆ ಸಾಲದೆ? ಹಲವು ದೇವರೆಂದು ಹೊಲಬುಗೆಟ್ಟು ನುಡಿವರು. ಕುಲಸ್ವಾಮಿ ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೊಬ್ಬನೆ ದೇವರೆಂದರಿದೆಡೆ ಸಾಲದೆ?