Index   ವಚನ - 279    Search  
 
ರೂಪು ಲಿಂಗವೋ ನಿರೂಪು ಲಿಂಗವೋ ಎಂಬುದ ವಿವರಿಸಿ ತಿಳಿದು ನೋಡೆ, ರೂಪು ಲಿಂಗದಲ್ಲಿ ತ್ರಿಭುವನಾಧಾರವಾದ ಶಿವ ಕಲಾ ರೂಪ ಚೈತನ್ಯ. ನಿರೂಪಲಿಂಗವ ಭಾವಿಸಿ, ಧ್ಯಾನಪೂಜೆಯ ಮಾಡಿ; ಕೋಟಿ ಸೂರ್ಯ ಪ್ರಕಾಶ ಚಿದ್ರೂಪ ಶಿವಲಿಂಗವ ನೆನಹಿನ ಕೊನೆಯ ಮೇಲಿರಿಸಿ ನೆನೆದು ನಿತ್ಯ ತೃಪ್ತನಾದ ಪರಾನಂದರೂಪ ಶಿವಯೋಗಿಯ ಯೋಗನಿದ್ರಾಮುದ್ರೆಯಲ್ಲಿ ತಾನಿದಿರೆಂಬುದ ಮರೆದು ಭಿನ್ನವಿಲ್ಲದೆ ಶಿವಸುಖದೊಳಗಿಹನು ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣನು.