ತತ್ವ ಮೂವತ್ತಾರರಿಂದತ್ತತ್ತ ಪರಕ್ಕೆ ಪರವಾದ
ಗುರುವಿನ ಅಂಗ ತಾನೆ
ಸಕಲ ನಿಃಕಲರೂಪಾದ ಲಿಂಗವು.
ಅದು ತಾನೆ ಮತ್ತೆ ಸಕಲಾಂಗವೆನಿಸುವ ಜಂಗಮವು.
ಆ ಜಂಗಮವು ತಾನೆ ಗುರುವಿನ ನಿಃಕಲಾಂಗವು.
ಶ್ರೀಗುರುವಿನ ಕಳೆಯಿಂದ ಹುಟ್ಟಿದ
ನಿಜಸುಖವೇ ಪ್ರಸಾದಲಿಂಗವು.
ಇಂತು ಗುರು ಲಿಂಗ ಜಂಗಮವೆನಿಸುವ
ಶುದ್ಧ ಸಿದ್ಧ ಪ್ರಸಿದ್ಧ ಲಿಂಗಕಳೆಗಳಿಂದತಿಶಯವಾಗಿ ಬೆಳಗುವ
ಶರಣ ತಾನೇ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು.