Index   ವಚನ - 408    Search  
 
ಸೂರ್ಯನ ಕರಜಾಲಂಗಳು ಸೂರ್ಯೋದಯವಾದಲ್ಲಿ ಹುಟ್ಟಿ, ಸೂರ್ಯನು ಅಸ್ತಮಿಸಲು ಕೂಡ ಅಡಗುವಂತೆ, ಮನೋವಿಕಾರದಿಂದ ಲೋಕವೆಲ್ಲವೂ ತೋರಿ, ಮನ ಲಯವಾದೊಡನೆ ಆ ಲೋಕವೆಲ್ಲವೂ ಅಡಗಿ, ಜ್ಞಾನತತ್ವವೊಂದೇ ತನ್ನ ಸ್ವರೂಪವಾಗಿ ಉಳಿದಿಹ ಯೋಗಿಗೆ ಮುಂದೆ ಅರಿಯಬೇಕಾದುದೊಂದೂ ಇಲ್ಲವಯ್ಯ. ಉಳಿದ ಉಳುಮೆ ಜ್ಞಾನರೂಪಾಗಿ ನಿಂದಿತಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣಂಗೇ.