Index   ವಚನ - 16    Search  
 
ಅನ್ನವನ್ನಿಕ್ಕಿದರೇನು? ಹೊನ್ನ ಕೊಟ್ಟರೇನು? ಹೆಣ್ಣು ಕೊಟ್ಟರೇನು? ಮಣ್ಣು ಕೊಟ್ಟರೇನು? ಪುಣ್ಯ ಉಂಟೆಂಬರು. ಅವರಿಂದಾದೊಡವೆ ಏನು ಅವರೀವುದಕ್ಕೆ? ಇದಕ್ಕೆ ಪುಣ್ಯವಾವುದು, ಪಾಪವಾವುದು? ನದಿಯ ಉದಕವ ನದಿಗೆ ಅರ್ಪಿಸಿ, ತನತನಗೆ ಪುಣ್ಯ ಉಂಟೆಂಬ ಬಡಹಾರುವರಂತೆ, ಸದಮಳ ಶಾಶ್ವತ ಮಹಾಘನಲಿಂಗವನರಿಯದೆ, ಇವೇನ ಮಾಡಿದರೂ ಕಡೆಗೆ ನಿಷ್ಪಲವೆಂದಾತ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ.