Index   ವಚನ - 21    Search  
 
ಅಯ್ಯಾ ಎನ್ನಂಗದ ಮೇಲಿಪ್ಪ ಲಿಂಗವು ಕರ್ಪುರದಂತಾಯಿತ್ತು. ಎನ್ನ ಪ್ರಾಣದ ಮೇಲಿಪ್ಪ ಲಿಂಗವು ಪರಂಜ್ಯೋತಿಯಂತಾಯಿತ್ತು. ಎನ್ನ ನಿಃಪ್ರಾಣದ ಮೇಲಿಪ್ಪ ಲಿಂಗವು ನಿರಂಜನದಂತಾಯಿತ್ತು. ಈ ತ್ರಿವಿಧವು ಏಕವಾದ ಭೇದವ ಹೇಳಿಹೆನು ಕೇಳಿರಣ್ಣಾ! ಎನ್ನ ಅಂಗದ ಮೇಲಿದ ಕರ್ಪುರದಂತಿರ್ದ ಲಿಂಗ, ಪ್ರಾಣದ ಮೇಲಿಪ್ಪ ಪರಂಜ್ಯೋತಿ ಲಿಂಗವ ಬೆರೆಯಿತ್ತು . ಎನ್ನ ಪ್ರಾಮದ ಮೇಲಿಪ್ಪ ಪರಂಜ್ಯೋತಿ ಲಿಂಗ, ನಿಃಪ್ರಾಣದ ಮೇಲಿಪ್ಪ ನಿರಂಜನ ಲಿಂಗವ ಬೆರೆಯಿತ್ತು. ಈ ತ್ರಿವಿಧವು ಏಕವಾದ ಮೇಲೆ, ಒಂದಲ್ಲದೆ ಎರಡುಂಟೆ? ಇದಕ್ಕೆ ಸಂದೇಹ ಬೇರಿಲ್ಲವಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.