Index   ವಚನ - 78    Search  
 
ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ? ಕಡೆ ನಡುವೆಂದೇನೊ ಮೃಡನ ಹಾಡುವಂಗೆ? ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ? ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ? ಕಲಿಯುಗದ ಕತ್ತಲೆಯ ದಾಂಟಿದವಂಗೆ, ನಿಮ್ಮ ನೆಲೆಯನರಿದ ಶರಣಂಗೆ ಇನ್ನು ಸ್ಥಲನೆಲೆ ಆವುದುಂಟು ಹೇಳಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ?