Index   ವಚನ - 101    Search  
 
ಕುದುರೆಯ ಕುಪ್ಪಟ ಘನವಾಯಿತ್ತು. ಆನೆಯ ಹರಿದಾಟ ನಿಲಬಾರದು. ಒಂಟೆಯ ಕತ್ತು ನೆಟ್ಟಗಾಯಿತ್ತು. ಬಂಟರ ಹರಿದಾಟ ಉಂಟು ಕಟ್ಟಿಗೆಯವರು ಉಗ್ಗಡಿಸುತ್ತ, ಭಟರುಗಳು ಪೊಗಳುತ್ತ , ಸಕಲವಾದ್ಯ ರಭಸದೊಳಗೆ ಸಂದಳಿಯೆಂಬ ಅಂದಳದ ಮೇಲೆ ಚಂದವಾಗಿ ಮನೋರಾಜ್ಯಂಗೆಯ್ವುತ್ತಿರಲು, ಈ ಸುಖವನೊಲ್ಲದೆ, ಮುಂದೆ ದುಃಖ ಉಂಟೆಂದು ಶರಣನರಿದು, ತಲೆ ಎತ್ತಿ ನೋಡಿ, ಘನಗುರುವಿನ ಹಸ್ತದಿಂದ ಅನುಜ್ಞೆಯಂ ಪಡೆದು, ಧ್ಯಾನ ಧಾರಣ ಸಮಾಧಿಯಿಂದ ತಿಳಿದು ನೋಡಲಾಗಿ, ಇತ್ತ ಶೂನ್ಯವೆಂಬ ಪಟ್ಟಣದೊಳಗೆ ಅನಾಮಿಕನೆಂಬ ಲಿಂಗ ಅರಸು, ಆ ಅರಸಿನ ಗೊತ್ತುವಿಡಿದು ಇತ್ತಲೆ ಮನವೆಂಬ ಅರಸನು ಹಿಡಿಯಲಾಗಿ ಹಿಡಿದು, ಆನೆ, ಕುದುರೆ, ಸೇನೆಯನೆಲ್ಲ ಸೂರೆಗೊಂಡು, ಭಂಡಾರ ಬೊಕ್ಕಸ ಅರಮನೆಯನೆಲ್ಲ ಸುಟ್ಟು ಬಟ್ಟಬಯಲಮಾಡಿದ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ.