Index   ವಚನ - 174    Search  
 
ಮನವೆ ಮಾರುತನ ಒಡಗೂಡಿರ್ದು, ತನುವೆ ವಿಕಾರದೊಳಗಿರ್ದು, ಮನವೆಂತು ಕಂಡಿತ್ತೆಂಬಿರಿ? ಎಲೆ ಅಣ್ಣಗಳಿರಾ, ಘನವೆಂತಿಪ್ಪುದೆಂದರೆ, ಈ ತನುವ ಮರೆದು, ಹರಿವ ಮನವ ಲಿಂಗದಲಿ ನಿಲಿಸಿ, ಈ ಜನಿತಕ್ಕೆ ನಾನಿನ್ನಾರೆಂದು ತ್ರಿಕಾಲದಲ್ಲಿಯೂ ಎಮ್ಮ ಶರಣರಿಗೆ ನೆನೆವನೆ ನಿತ್ಯನು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.