Index   ವಚನ - 193    Search  
 
ಲಿಂಗಪ್ರಸಾದವ ಜಂಗಮಕ್ಕೆ ಕೊಡುವ ಕರ್ಮಿಗಳು ನೀವು ಕೇಳಿರೆ. ಜಂಗಮಪ್ರಸಾದವ ಲಿಂಗಕ್ಕೆ ಕೊಡುವ ಧರ್ಮಿಗಳು ನೀವು ಕೇಳಿರೆ. ಲಿಂಗಪ್ರಸಾದವ ಜಂಗಮಕ್ಕೆ ಕೊಡುವುದು ಅನಾಚಾರ. ಜಂಗಮಪ್ರಸಾದವ ಲಿಂಗಕ್ಕೆ ಕೊಡುವುದು ಸದಾಚಾರ. ಅದೆಂತೆದಡೆ- ಶಿವಧರ್ಮ ಪುರಾಣದಲ್ಲಿ: ಲಿಂಗಾರ್ಪಿತ ಪ್ರಸಾದಂ ಚ ನದದ್ಯಾಜ್ಜಂಗಮಾರ್ಪಿತಂ| ಜಂಗಮಾರ್ಪಿತ ಪ್ರಸಾದಂ ತದದ್ಯಾಲಿಂಗಮೂರ್ತಿಷು|| ಎಂದುದಾಗಿ, ಇದು ಕಾರಣ, ಜಂಗಮಪ್ರಸಾದವ ಲಿಂಗಕ್ಕೆ ಕೊಟ್ಟು ಕೊಂಬೆನಾಗಿ, ಎನ್ನ ಭವಂ ನಾಸ್ತಿಯಾಯಿತ್ತಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.