Index   ವಚನ - 195    Search  
 
ವಜ್ರದ ಮನೆಯೊಳಗಿರ್ದು, ಗೊರಲೆ ಮುಟ್ಟಿತೆಂಬ ಸಂದೇಹವೇಕೆ ? ಭದ್ರಗಜ ಮೇಲೆ ಬರುತಿರ್ದು ಕೆಳಗಿರ್ದ ಗುಜ್ಜನಾಯಿ ಮುಟ್ಟಿತೆಂಬ ಸಂದೇಹವೇಕೆ? ಸಂಜೀವನ ಕೈಯ ಸಾರಿರ್ದು ಇಂದಿಗೆ ನಾಳಿಗೆಂಬ ಸಂದೇಹವೇಕೆ ? ಸಜ್ಜನ ಸದ್ಭಕ್ತರ ಸಂಗದೊಳಗಿರ್ದು, ಸತ್ತೆನೋ, ಬದುಕಿದೆನೋ ಎಂಬ ಸಂದೇಹವೇಕೆ ? ಹತ್ತರಡಿಯ ಬಿದ್ದ ಹಾವು ಸಾಯದೆಂದು ಗಾದೆಯ ಮಾತ ನುಡಿವರು. ನಿತ್ಯರಪ್ಪ ಶರಣರ ಸಂಗದೊಳಗಿರ್ದು, ಮತ್ತೊಂದು ಉಂಟೆಂದು ಭಾವಿಸಿ ನೋಡುವ ಕತ್ತೆಮನುಜರ ಅತ್ತ ಹೊದ್ದದೆ, ಇತ್ತಲೆ ನಿಂದು ನಾಚಿ ನಗುತಿರ್ದ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ .