ಹಾವ ಹಿಡಿವುದ ಹಾವಾಡಿಗ ಬಲ್ಲನಲ್ಲದೆ,
ಕಡೆಯಲಿದ್ದ ಜಾವಳಿಗನೆತ್ತ ಬಲ್ಲನು?
ನೋವು ಬಂದರೆ ವ್ಯಾಧಿಯಲ್ಲಿ ನರಳುವಾತ ಬಲ್ಲನಲ್ಲದೆ,
ಕಡೆಯಲಿಪ್ಪ ದುರುಳನೆತ್ತ ಬಲ್ಲನು?
ದೇವ ನಿಮ್ಮ ಶರಣನು ಬೆರೆದಿಪ್ಪ ಭೇದವ
ನೋವುತ್ತ ಬೇವುತ್ತ ಧಾವತಿಗೊಳುತಿಪ್ಪ
ಗಾವಿಲರೆತ್ತ ಬಲ್ಲರು ಲಿಂಗೈಕ್ಯರನುವ,
ಬಸವಪ್ರಿಯ ಕೂಡಲಚೆನ್ನಬಸವಣ್ಣಾ?
Art
Manuscript
Music
Courtesy:
Transliteration
Hāva hiḍivuda hāvāḍiga ballanallade,
kaḍeyalidda jāvaḷiganetta ballanu?
Nōvu bandare vyādhiyalli naraḷuvāta ballanallade,
kaḍeyalippa duruḷanetta ballanu?