Index   ವಚನ - 249    Search  
 
ಹೊತ್ತುಹೊತ್ತಿಗೆ ಲಿಂಗಪೂಜೆಯ ಮಾಡಿಯೂ ಮತ್ತೆಯು ಸತ್ಯವಾವುದು, ನಿತ್ಯವಾವುದೆಂದರಿಯದೆ ಕೆಟ್ಟರೆಲ್ಲ ಜಗವು. ಸತ್ಯವಾಗಿ ನುಡಿವ ಶರಣರ ಕಂಡರೆ, ಕತ್ತೆಮಾನವರೆತ್ತಬಲ್ಲರೊ? ಅಸತ್ಯವನೆ ನುಡಿದು, ಹುಸಿಯನೆ ಬೋಧಿಸುವ ಹಸುಕರ ಕಂಡರೆ, ಇತ್ತ ಬನ್ನಿ ಎಂಬರು. ಇಂತಪ್ಪ ಅನಿತ್ಯದೇಹಿಗಳ ಭಕ್ತರೆಂದು ಜಂಗಮವೆಂದು ನೋಡಿದರೆ, ನುಡಿಸಿದರೆ, ಮಾತನಾಡಿದರೆ, ನೀಡಿದರೆ, ಅಘೋರನರಕವೆಂದು ನಮ್ಮ ಆದ್ಯರ ವಚನ ಸಾರುತಿದೆ, ಬಸವಪ್ರಿಯ ಕೂಡಲಚೆನ್ನಬಸಣ್ಣಾ.