Index   ವಚನ - 250    Search  
 
ಹೊತ್ತುಹೋಗದ ಮುನ್ನ ನೀವು ಸತ್ತಂತೆ ಇರಿರೊ. ಸತ್ತಂತೆ ಇದಲ್ಲದೆ ತತ್ವವ ಕಾಣಬಾರದು. ತತ್ವವ ಕಂಡಲ್ಲದೆ ಮನ ಬತ್ತಲೆಯಾಗದು. ಬತ್ತಲೆಯಾದಲ್ಲದೆ ಘನವ ಕಾಣಬಾರದು. ಘನವ ಕಂಡಲ್ಲದೆ ನಿಮ್ಮ ನೆನಹು ನಿಷ್ಪತ್ತಿಯಾಗದು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.