ಕಂಡ ಚಿತ್ತ ವಸ್ತುವಿನಲ್ಲಿ ಮಗ್ನವಾದ ಮತ್ತೆ,
ಸಂಸಾರ ವಿಷಯಕ್ಕೆ ಮತ್ತನಪ್ಪುದೆ?
ಮತ್ತೆ ಭಕ್ತರ ಗೃಹ ರಾಜದ್ವಾರದ ತಪ್ಪಲ ಕಾಯ್ವದೆ?
ಆ ಚಿತ್ತ ತೊಟ್ಟುಬಿಟ್ಟ ಹಣ್ಣು, ಕಟ್ಟಿಸತ್ತ ಬಿದಿರು,
ದೃಷ್ಟ ನಷ್ಟವಾದ ಅಂಗಕ್ಕೆ ಮತ್ತೆ ಬಪ್ಪುದೆ ಪುನರಪಿಯಾಗಿ?
ಇದು ನಿಶ್ಚಯ, ನಿಜಲಿಂಗಾಂಗ ನಿರ್ಲೇಪನ ಹೊಲಬು.
ಮತ್ತೆ ಜಗದ ಮೊತ್ತದವನಲ್ಲ ,
ನಿಃಕಳಂಕ ಕೂಡಲಚೆನ್ನಸಂಗಮದೇವ ತಾನಾದ ಶರಣ.