Index   ವಚನ - 8    Search  
 
ಮರದ ದೇವರಿಗೆ ಉರಿಯ ಪೂಜೆಯುಂಟೆ? ಮಣ್ಣಿನ ಹರುಗುಲದಲ್ಲಿ ತುಂಬಿದ ತೊರೆಯ ಹಾಯಬಹುದೆ? ತೆರಕಾರನ ನಚ್ಚಿ ಕಳನೇರಬಹುದೆ? ಇಂತೀ ಗುಣದ ದೃಷ್ಟವ ಕಡೆಗಾಣಿಸಿದಲ್ಲಿ, ಪ್ರಮಾಣಿಸಿದಲ್ಲಿಯೂ ಏತರನು, ಹಾಂಗೆ ಬರಿಹುಂಡರ, ಆಚಾರಭ್ರಷ್ಟರ, ಅರ್ತಿಕಾರರ, ಚಚ್ಚಗೋಷ್ಠಿವಂತರ, ಬಹುಯಾಚಕರ, ಪಗುಡೆ ಪರಿಹಾಸಕರ, ತ್ರಿವಿಧದಲ್ಲಿ ಸೂತವನರಸುವ ವಿಶ್ವಾಸಘಾತಕರ, ಅಪ್ರಮಾಣ ಪಾತಕರ, ಭಕ್ತಿಯ ತೊಟ್ಟಲ್ಲಿ ಭಕ್ತನೆಂದಡೆ, ವಿರಕ್ತಿಯ ತೊಟ್ಟಲ್ಲಿ ಕರ್ತುವೆಂದಡೆ, ದೀಕ್ಷೆಯ ಮಾಡಿದಲ್ಲಿ ಗುರುವೆಂದಡೆ, ತಪ್ಪ ಕಂಡಲ್ಲಿ ಎತ್ತಿ ತೋರುವೆನು. ಗುಟ್ಟಿನಲ್ಲಿ ಚಿತ್ತ ಬಿಡಲಾರದಿರ್ದಡೆ, ನಿಃಕಳಂಕ ಕೂಡಲಚೆನ್ನ ಸಂಗಮದೇವರಾದಡೂ ಎತ್ತಿಹಾಕುವೆನು.