Index   ವಚನ - 12    Search  
 
ಗರ್ವದಿಂದ ಮಾಡುವ ಭಕ್ತಿ ದ್ರವ್ಯದ ಕೇಡು; ನಡೆಯಿಲ್ಲದ ನುಡಿ ಅರಿವಿಂಗೆ ಹಾನಿ; ಕೊಡದೆ ತ್ಯಾಗಿ ಎನಿಸಿಕೊಂಬುದು ಮುಡಿಯಿಲ್ಲದ ಶೃಂಗಾರ; ದೃಢವಿಲ್ಲದ ಭಕ್ತಿ ಅಡಿ ಒಡೆದ ಕುಂಭದಲ್ಲಿ ಸುಜಲವ ತುಂಬಿದಂತೆ, ಮಾರಯ್ಯಪ್ರಿಯ ಅಮರೇಶ್ವರಲಿಂಗವ ಮುಟ್ಟದ ಭಕ್ತಿ.