Index   ವಚನ - 8    Search  
 
ನೆನೆವುತ್ತಿದೆ ಮನ; ದುರ್ವಾಸನೆಗೆ ಹರಿವುತ್ತಿದೆ ಮನ; ಕೊನೆಗೊಂಬೆಗೆ ಎಳೆವುತ್ತಿದೆ ಮನ; ಕಟ್ಟಿಗೆ ನಿಲ್ಲದು ಮನ; ಬಿಟ್ಟಡೆ ಹೋಗದು ಮನ. ತನ್ನಿಚ್ಫೆಯಲಾಡುವ ಮನವ ಕಟ್ಟಿಗೆ ತಂದು, ಗೊತ್ತಿಗೆ ನಿಲಿಸಿ, ಬಚ್ಚ ಬರಿಯ ಬಯಲಿನೊಳಗೆ ಓಲಾಡುವ ಶರಣರ ಪಾದದಲ್ಲಿ ನಾ ಬೆಚ್ಚಂತಿದ್ದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ