Index   ವಚನ - 9    Search  
 
ಮನವ ನಿರ್ಮಲವ ಮಾಡಿಹೆನೆಂದು ತನುವ ಕರಗಿಸಿ ಮನವ ಬಳಲಿಸಿ ಕಳವಳಿಸಿ, ಕಣ್ಣುಕಾಣದ ಅಂಧಕರಂತೆ ಮುಂದುಗಾಣದೆ, ಸಂದೇಹದಲ್ಲಿ ಮುಳುಗಿರುವ ಮನುಜರಿರಾ, ನೀವು ಕೇಳಿರೊ, ಹೇಳಿಹೆನು. ಮನವ ನಿರ್ಮಲವ ಮಾಡಿ, ಆ ಘನವ ಕಾಂಬುದಕ್ಕೆ ಆ ಮನವೆಂತಾಗಬೇಕೆಂದಡೆ: ಗಾಳಿ ಬೀಸದ ಜಲದಂತೆ, ಮೋಡವಿಲ್ಲದ ಸೂರ್ಯನಂತೆ, ಬೆಳಗಿದ ದರ್ಪಣದಂತೆ ಮನ ನಿರ್ಮಲವಾದಲ್ಲದೆ ಆ ಮಹಾಘನವ ಕಾಣಬಾರದೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.