Index   ವಚನ - 12    Search  
 
ಹೊತ್ತು ಹೊತ್ತಿಗೆ ಮೆತ್ತಹಾಕಿ ತಿಪ್ಪೆಯಲ್ಲಿ ಕರ್ಪೂರವನರಸುವನಂತೆ, ತಿಪ್ಪೆಯಂತಹ ಒಡಲೊಳಗೆ ಕರ್ತೃವನರಸಿಹೆನೆಂಬ ಅಣ್ಣಗಳಿರಾ, ನೀವು ಕೇಳಿರೊ, ಹೇಳಿಹೆನು. ಆ ಕರ್ತೃವನರಸುವುದಕ್ಕೆ ಚಿತ್ತ ಹೇಗಾಗಬೇಕೆಂದಡೆ: ಜಲದೊಳಗಣ ಸೂರ್ಯನ ಪ್ರತಿಬಿಂಬದಂತಿರಬೇಕು. ಮೋಡವಿಲ್ಲದ ಚಂದ್ರಮನಂತಿರಬೇಕು. ಬೆಳಗಿನ ದರ್ಪಣದಂತಿರಬೇಕು.ಇಂತು ಚಿತ್ತಶುದ್ಧವಾದಲ್ಲದೆ, ಆ ಕರ್ತೃವಿನ ನೆಲೆಯ ಕಾಣಬಾರದೆಂದರು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.