Index   ವಚನ - 13    Search  
 
ಮನ ಕತ್ತಲೆ, ತನು ಹಮ್ಮು, ನೆನಹು ಮರೆವೆ, ಇವರೊಳಗೆ ಇದ್ದು ಘನವ ಕಂಡೆಹೆನೆಂಬ ಅಣ್ಣಗಳಿರಾ, ನೀವು ಕೇಳಿರೊ. ಘನವ ಕಾಂಬುದಕ್ಕೆ ಮನವೆಂತಾಗಬೇಕೆಂದಡೆ, ಅಕ್ಕಿಯ ಥಳಿಸಿದಂತೆ, ಹಲ್ಲ ಸುಲಿದಂತೆ, ಕನ್ನಡಿಯ ನೋಡಿದಂತೆ, ಮನ ನಿರ್ಮಲವಾದಲ್ಲದೆ ಘನವ ಕಾಣಬಾರದು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.