ಮಾಣಿಕವ ಕಂಡವರು ತೋರುವರೆ ಅಯ್ಯಾ,
ಮುತ್ತ ಕಂಡವರು ಅಪ್ಪಿಕೊಂಬರಲ್ಲದೆ?
ಬಿಚ್ಚಿ ಬಿಚ್ಚಿ ತೋರುವರೆ ಅಯ್ಯಾ,
ಆ ಮುತ್ತಿನ ನೆಲೆಯನು, ಮಾಣಿಕದ ಬೆಲೆಯನು?
ಬಿಚ್ಚಿ ಬೇರಾಗಿ ತೋರಿ ರಕ್ಷಣೆಯ ಮಾಡಿದ ಕಾರಣದಿಂದ
ಬಚ್ಚಬರಿಯ ಬೆಳಗಿನೊಳಗೋಲಾಡಿ
ನಿಮ್ಮ ಪಾದದೊಳಗೆ ನಿಜಮುಕ್ತಳಾದೆನಯ್ಯಾ,
ಚೆನ್ನಮಲ್ಲೇಶ್ವರ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
Art
Manuscript
Music
Courtesy:
Transliteration
Māṇikava kaṇḍavaru tōruvare ayyā,
mutta kaṇḍavaru appikombarallade?
Bicci bicci tōruvare ayyā,
ā muttina neleyanu, māṇikada beleyanu?
Bicci bērāgi tōri rakṣaṇeya māḍida kāraṇadinda
baccabariya beḷaginoḷagōlāḍi
nim'ma pādadoḷage nijamuktaḷādenayyā,
cennamallēśvara appaṇṇapriya cennabasavaṇṇā.