Index   ವಚನ - 38    Search  
 
ಕಂಗಳ ಮುಂದೆ ಮಾಣಿಕವಿದ್ದು ಕಾಣಲೇಕರಿಯರಯ್ಯಾ? ಬಾಗಿಲ ಮುಂದೆ ಹಾಲಸಾಗರವಿದ್ದು ಒರತೆಯ ನೀರಿಗೆ ಹಾರುವಂತೆ ಕಂಗಳ ಮುಂದೆ ಮಹಾಶರಣನಿದ್ದು ಕತ್ತಲೆ ಎನಲೇಕೆ? ಇನ್ನು ಬೇರೆ ಲಿಂಗವನರಸೆಹೆನೆನಲೇಕೆ? ಆ ಮಹಾಶರಣ ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.