Index   ವಚನ - 64    Search  
 
ಕನಿಷ್ಠದಲ್ಲಿ ಹುಟ್ಟಿದೆ, ಉತ್ತಮದಲ್ಲಿ ಬೆಳೆದೆ, ಸತ್ಯ ಶರಣರ ಪಾದವಿಡಿದೆ. ಆ ಶರಣರ ಪಾದವಿಡಿದು ಗುರುವ ಕಂಡೆ, ಲಿಂಗವ ಕಂಡೆ, ಜಂಗಮವ ಕಂಡೆ, ಪಾದೋದಕವ ಕಂಡೆ, ಪ್ರಸಾದವ ಕಂಡೆ. ಇಂತಿವರ ಕಂಡೆನ್ನ ಕಂಗಳ ಮುಂದಣ ಕತ್ತಲೆ ಹರಿಯಿತ್ತು. ಕಂಗಳ ಮುಂದಣ ಕತ್ತಲೆ ಹರಿಯಲೊಡನೆ, ಮಂಗಳದ ಮಹಾಬೆಳಗಿನೊಳಗೋಲಾಡಿ ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.