Index   ವಚನ - 66    Search  
 
ಅಯ್ಯಾ, ನರರೊಳು ಹುಟ್ಟಿ, ಮರಹಿನೊಳಗೆ ಬಿದ್ದವಳ ತಂದು, ಮಹಾಶರಣರು ಎನಗೆ ಕುರುಹ ತೋರಿದರು. ಗುರುವೆಂಬುದನರುಹಿದರು, ಜಂಗಮವೆ ಜಗದ ಕರ್ತುವೆಂದರುಹಿದರು. ಅವರ ನೆಲೆವಿಡಿದು ಮನವ ನಿಲಿಸಿದೆ, ಕಾಯ ಜೀವವೆಂಬುದನರಿದೆ, ಭವಬಂಧನವ ಹರಿದೆ, ಮನವ ನಿರ್ಮಲವ ಮಾಡಿದೆ. ಬೆಳಗಿದ ದರ್ಪಣದಂತೆ ಚಿತ್ತ ಶುದ್ದವಾದಲ್ಲಿ, ನೀವು ಅಚ್ಚೊತ್ತಿದ್ದ ಕಾರಣದಿಂದ ನಿಮ್ಮ ಪಾದವಿಡಿದು ನಾನು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.