Index   ವಚನ - 82    Search  
 
ನಿರ್ಮಳವಾದ ದೇಹದಲ್ಲಿ ಇನ್ನೊಂದ ಕಲ್ಪಿಸಲುಂಟೆ? ಲಿಂಗವಾದ ತನುವಿನೊಳಗೆ ಜಂಗಮದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಪ್ರಸಾದವಾದ ಕಾಯದೊಳಗೆ ತನ್ನ ಪ್ರಾಣಲಿಂಗದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಈ ಸರ್ವಾಂಗವೂ ಲಿಂಗವಾಗಿ, ಜಂಗಮನೆ ಪ್ರಾಣವಾಗಿ, ಅವರ ಪಾದದಲ್ಲಿಯೇ ನಾನು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.