Index   ವಚನ - 85    Search  
 
ನರರ ಬೇಡೆನು, ಸುರರ ಹಾಡೆನು, ಕರಣಂಗಳ ಹರಿಯಬಿಡೆನು, ಕಾಮನ ಬಲೆಗೆ ಸಿಲ್ಕೆನು, ಮರೆವೆಗೊಳಗಾಗೆನು. ಪ್ರಣವ ಪಂಚಾಕ್ಷರಿಯ ಜಪಿಸಿಹೆನೆಂದು ತನುವ ಮರೆದು ನಿಜಮುಕ್ತಳಾದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.