Index   ವಚನ - 102    Search  
 
ನೋಟವನಿಟ್ಟು ನೋಡುತಿರಲು ಮೂರಾಯಿತ್ತು. ಮೂರನೆ ಮೂಲಿಗನೆಂದರಿದು, ಮುದುಡ ಹರಿದು, ಸದವ ಬಡಿದು, ಪೋದರೌ, ನಿರ್ದಸಿಗೆಯ ಪಿರಿದು, ಕದಳಿಯ ಕಡಿದು, ಕಂಭ ಬೇವ ಬೆಂಬಳಿವಿಡಿದು ಹೋಗುತಿರಲು, ಬೇರೆ ಕಂಡೆ. ಕಿತ್ತಿಹೆನೆಂದಡೆ ಕೀಳಬಾರದು, ನೆಟ್ಟಿಹೆನೆಂದಡೆ ನೆಡಬಾರದು. ಬಯಲಲ್ಲಿ ಬೆಳೆದ ಬೇರ ಮುಟ್ಟಿ ಹುಟ್ಟುಗೆಟ್ಟು ಹೋದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.