Index   ವಚನ - 109    Search  
 
ಜಂಗಮವೆ ಗುರು, ಜಂಗಮವೆ ಲಿಂಗ, ಜಂಗಮವೆ ಪ್ರಾಣವೆಂದಡೆ, ಇಲ್ಲವೆಂಬ ಅಂಗಹೀನರಿರಾ, ನೀವು ಕೇಳಿರೊ. ಜಂಗಮವು ಗುರುವಲ್ಲದಿದ್ದಡೆ, ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವ ಹಿಂಗಿಸುವನೆ? ಜಂಗಮವು ಲಿಂಗವಲ್ಲದಿದ್ದಡೆ, ಪ್ರಾಣಲಿಂಗವ ತೋರುವನೆ? ಜಂಗಮವು ಪ್ರಾಣವಲ್ಲದಿದ್ದಡೆ, ಪ್ರಾಣಕ್ಕೆ ಪ್ರಸಾದವನೂಡುವನೆ? ಇದ ಕಂಡು ಕಾಣೆನೆಂಬ ಭಂಗಿತರ ನುಡಿಯ ಮೆಚ್ಚರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.