Index   ವಚನ - 24    Search  
 
ಉದಕದ ತಂಪವ ತಾವರೆಯಲ್ಲದೆ ಹೊರಗಣ ಕೊರಡೆತ್ತಬಲ್ಲುದೊ? ಹೂವಿನ ಪರಿಮಳವ ತುಂಬಿಯಲ್ಲದೆ ಹೊರಗಣ ನೊಣನೆತ್ತಬಲ್ಲುದೊ? ಕ್ಷೀರದ ರುಚಿಯ ಹಂಸೆಯಲ್ಲದೆ ಕೆಲದಲ್ಲಿ ಬಕನೆತ್ತವಬಲ್ಲುದೊ? ಮಾವಿನ ಹಣ್ಣಿನ ರುಚಿಯನರಗಿಳಿಗಳು ಬಲ್ಲವಲ್ಲದೆ ಹೊರಗಣ ಕೋಳಿಗಳೆತ್ತ ಬಲ್ಲವೊ? ಊಟದ ರುಚಿಯನು ನಾಲಗೆಯಲ್ಲದೆ ಕಲಸುವ ಕೈ ತಾನೆತ್ತ ಬಲ್ಲುದೊ? ಕೂಟದ ಸುಖವನು ಯೌವನೆಯಲ್ಲದ ಬಾಲೆ ತಾನೆತ್ತ ಬಲ್ಲಳೊ? ಚಂದ್ರಸೂರ್ಯರಂತರಾಂತರವ ಖೇಚರರು ಬಲ್ಲರಲ್ಲದೆ ಗಗನದೊಳಗಾಡುವ ಹದ್ದುಗಳು ತಾವೆತ್ತ ಬಲ್ಲವೊ? ಎಲೆ ಮಹಾಲಿಂಗ ಕಲ್ಲೇಶ್ವರಯ್ಯಾ. ನಿಮ್ಮ ನಿತ್ಯನಿಜೈಕ್ಯರ ನಿಲುವನು ಮಹಾನುಭಾವಿಗಳು ಬಲ್ಲರಲ್ಲದೆ ಲೋಕದ ಜಡಜೀವಿಗಳೆನಿಸುವ ಮಾನವರೆತ್ತ ಬಲ್ಲರೊ?