Index   ವಚನ - 48    Search  
 
ಗುರುಕರುಣಾಮೃತವಿಲ್ಲದ ಭಕ್ತಿಯ ಅನು, ಮನದಲನುಕರಿಸುವ ಜೀವಿಗಿನ್ನೆಲ್ಲಿಯದೊ? ಸತ್ಕ್ರಿಯೆ ಸತ್ಪಥವಿನ್ನೆಲ್ಲಿಯದೊ? ಇದು ಕಾರಣ, ಮಹಾಲಿಂಗ ಕಲ್ಲೇಶ್ವರದೇವ ಲಿಂಗ ಜಂಗಮ ಕರುಣವಿಲ್ಲದ ಜಡಮತಿಗಿನ್ನೆಲ್ಲಿಯದೊ?