Index   ವಚನ - 68    Search  
 
ಪೂರ್ವಜಾತವ ಕಳೆದು ಪುನರ್ಜಾತನಾದ ಬಳಿಕ, ಏನೆಂದೆನಲುಂಟೆ? ಭಕ್ತಕಾಯ ಮಮಕಾಯವಾದ ಬಳಿಕ, ಏನೆಂದೆನಲುಂಟೆ? ಅದೆಂತೆಂದಡೆ: ನ ಮುಕ್ತಿಶ್ಚ ನ ಧರ್ಮಶ್ಚ ನ ಪುಣ್ಯಂ ನ ಚ ಪಾಪಕಂ | ನ ಕರ್ಮಾ ಚ ನ ಜನ್ಮಾ ಚ ಗುರೋರ್ಭಾವನೀರಿಕ್ಷಣಾತ್ || ಎಂದುದಾಗಿ, ಇದು ಕಾರಣ, ಹಮ್ಮು ಬಿಮ್ಮು ಸೊಮ್ಮನಳಿದ, ಮಹಾಲಿಂಗ ಕಲ್ಲೇಶ್ವರ ತಾನಾದ ಬಳಿಕ, ಏನೆಂದೆನಲುಂಟೆ?