Index   ವಚನ - 81    Search  
 
ಮಾಡಿದ ಮಾಟದೊಳಗೆ ನುಡಿ ಘನವಾಡದೆ ಭಕ್ತನೆ? ಅಲ್ಲ. ಶೀಲವ ಹೇಳಿ ಮಾಡಿಸಿಕೊಂಬನ್ನಕ್ಕರ ಶೀಲವಂತನೆ? ಅಲ್ಲ. ನೋಡಿ ಸಯಿಧಾನಬೇಕೆಂಬನ್ನಕ್ಕರ ನಿತ್ಯನೇಮಿಯೆ? ಅಲ್ಲ. ಶೀಲ, ಮೀಸಲು, ಭಾಷೆ ಲಿಂಗದೊಡಲು, ಪ್ರಾಣ ಜಂಗಮವಾಗಿಪ್ಪ ಭಕ್ತಂಗೆ ಮಹಾಲಿಂಗ ಕಲ್ಲೇಶ್ವರಲಿಂಗ ತಾನೆ ಪ್ರಾಣವಾಗಿಪ್ಪನು.