Index   ವಚನ - 10    Search  
 
ಮಣ್ಣೆಂಬ ಘಟದ ಮಧ್ಯದಲ್ಲಿ ಹೊನ್ನೆಂಬ ಸುರೆ ಹುಟ್ಟಿತ್ತು. ಹೆಣ್ಣೆಂಬ ಬಟ್ಟಲಲ್ಲಿ ಅಂತು ಈಂಟಲಾಗಿ ಲಹರಿ ತಲೆಗೇರಿತ್ತು. ಈ ಉನ್ಮತ್ತದಲ್ಲಿ ಮಗ್ನರಾದವರೆಲ್ಲರೂ ಆರುಹಿರಿಯರೆಂತಪ್ಪರೊ? ಭಕ್ತಿ ವಿರಕ್ತಿಯೆಂಬುದು ಇತ್ತಲೆ ಉಳಿಯಿತ್ತು. ಧರ್ಮೇಶ್ವರಲಿಂಗದತ್ತ ಮುಟ್ಟಿದಡಂತಿಲ್ಲ.