Index   ವಚನ - 15    Search  
 
ಚತುರ್ವಿಂಶತಿತತ್ವಕೂಡಿ ಶರೀರ ಹೇಗಾಯಿತ್ತೆಂದಡೆ, ಹೇಳುವೆ ಕೇಳಿರಣ್ಣಾ: ಆ ಆಕಾಶ ಆಕಾಶವ ಬೆರಸಲು ಜ್ಞಾನ ಹುಟ್ಟಿತ್ತು. ಆ ಆಕಾಶ ವಾಯುವ ಬೆರಸಲು ಮನ ಹುಟ್ಟಿತ್ತು. ಆಕಾಶ ಅಗ್ನಿಯ ಬೆರಸಲು ಅಹಂಕಾರ ಹುಟ್ಟಿತ್ತು. ಆಕಾಶ ಅಪ್ಪುವ ಬೆರಸಲು ಬುದ್ಧಿ ಹುಟ್ಟಿತ್ತು. ಆಕಾಶ ಪೃಥ್ವಿಯ ಬೆರಸಲು ಚಿತ್ತ ಹುಟ್ಟಿತ್ತು. ಇಂತಿವು ಕರಣಚತುಷ್ಟಯಂಗಳುತ್ಪತ್ತಿಯೆಂದು ಹೇಳಲ್ಪಟ್ಟಿತ್ತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.