Index   ವಚನ - 21    Search  
 
ವಾಯುವಿನೊಳಗಣ ವಾಯು ಉದಾನವಾಯು. ವಾಯುವಿನೊಳಗಣ ಆಕಾಶ ಸಮಾನವಾಯು. ವಾಯುವಿನೊಳಗಣ ಅಗ್ನಿ ವ್ಯಾನವಾಯು. ವಾಯುವಿನೊಳಗಣ ಅಪ್ಪು ಅಪಾನವಾಯು. ವಾಯುವಿನೊಳಗಣ ಪೃಥ್ವಿ ಪ್ರಾಣವಾಯು. ಇಂತಿವು ವಾಯುವಿನ ಪಂಚೀಕೃತಿಯೆಂದು ಹೇಳಲ್ಪಟ್ಟಿತ್ತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.