Index   ವಚನ - 33    Search  
 
ಜಗವಿದ್ದಂದು ನೀನೆ, ಜಗವಿಲ್ಲದಂದು ನೀನೆ ; ಪಂಚಶತಕೋಟಿ ವಿಸ್ತೀರ್ಣ ಭೂಮಂಡಲವಿದ್ದಂದು ನೀನೆ, ಅವು ಇಲ್ಲದಂದು ನೀನೆ; ಈರೇಳುಭುವನ ಹದಿನಾಲ್ಕು ಲೋಕವಿದ್ದಂದು ನೀನೆ, ಅವು ಇಲ್ಲದಂದು ನೀನೆ; ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.