Index   ವಚನ - 41    Search  
 
ಬೆಳಗಿನೊಳು ಮಹಾಬೆಳಗಿನ ಜ್ಯೋತಿಯ ಕಂಡೆನು, ಶತಕೋಟಿ ಮಿಂಚಿನ ಪ್ರಭೆಯ ಕಂಡೆನು, ಅನಿಲನ ಸಂಗದಲುರಿವ ಕರ್ಪುರದ ಗಿರಿಯ ಕಂಡೆನು. ಕಂಡ ಕಾರಣ, ಎನ್ನ ಪಿಂಡದೊಳಗಿಹ ಸ್ವಯಜ್ಞಾನವೆ ಪರಬ್ರಹ್ಮವೆಂದು ತಿಳಿದು ಸಂತೈಸುತಿದ್ದೆ. ಭೇದದಿಂದೆ ಪರಮಾತ್ಮ ಎನ್ನ ಮರ್ತ್ಯಕ್ಕೆ ಆಜ್ಞೆಯಿಸಿ ಕಳುಹಿ ಅಂಜದಿರೆಂದು ಅಭಯಕೊಟ್ಟು, ತಲೆದಡಹಿ, ನೀನಿದ್ದಲ್ಲಿ ನಾನಿಹೆನೆಂದು ನಿರೂಪಿಸಿ, ಆದಿಪಿಂಡವ ಮಾಡಿ, ಜಗಕ್ಕೆ ನಿರ್ಮಿಸೆ, ಹೇಮಗಲ್ಲ ಹಂಪನೆಂಬ ನಾಮವಿಡಿದು ಬಂದೆ. ಆ ಭೇದವ ಪಿಂಡಜ್ಞಾನದಿಂದಲರಿದು ಆಚರಿಸುತ್ತಿದ್ದೆನು ಎನ್ನಾಳ್ದ [ಪರಮ]ಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.