Index   ವಚನ - 58    Search  
 
ಕೂಪದ ತಡಿಯ ಹುಲ್ಲ ಮೇವ ಎರಳೆಯನೆಚ್ಚಲು ಬಂದ ವ್ಯಾಧನ ಬಾಣದಲೊಂದು ಅಚ್ಚ ಆಶ್ಚರ್ಯವ ಕಂಡೆನು. ಕರಿಯ ಮುಖವೈದು, ಬಿಳಿಯ ಮುಖವೈದು, ಮುಂದೈದು ಮುಖದ ಸಂಭ್ರಮವ ಕಂಡು ಎರಳೆ ಬೆದರಿ ಬಾವಿಯ ಬೀಳುತಿರ್ದಡಿದೇನು ಚೋದ್ಯವೋ! ಚೋದ್ಯದ ಹಗರಣವ ಕಂಡು ಅಡವಿಯ ರಕ್ಷಿ ನಗುತಿದೆ ಇದೇನೋ ನಿನ್ನ ಮಾಯದ ವಿಗಡ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ?