Index   ವಚನ - 78    Search  
 
ಕಣ್ಗಾಣದೆ ಲೋಕ ಮಾಯಾತಮಂಧವೆಂಬ ಬಣ್ಣಛಾಯಕ್ಕೆ ಸಿಲ್ಕಿ ಭ್ರಮಿತಗೊಂಡಿತು. ತನುಮದ ಹುತ್ತದೊಳು ಮನವಿಕಾರದ ಸರ್ಪ ಜನರನೆಲ್ಲರ ಕಚ್ಚಿ ವಿಷವೇರಿಸಿ ಅನುದಿನ ಉಳಿಯಗೊಡದಾ ಮಾಯಾತಮಂಧವೆಂಬ ಅಣಲಿಂಗೆ ಗುರಿಯಾಗಿ ಬರಿದೆ ಕಲಿಗೆಡುತಲಿ. | 1 | ಷಡೂರ್ಮೆ ಷಟ್ಕರ್ಮ ಷಡ್ಭಾವವೈಕರಣ ಷಡ್ಭ್ರಮೆಗಳೆಂದೆಂಬುದ ಷಡು ಅಂಗ ಕತ್ತಲೆಗೆ ನಡೆದು ಮೈಮರೆದು ಬರಿದೆ. | 2 | ಅಸಿಯ ಜವ್ವನೆಯರ ವಿಷಯರಸವೆಂದೆಂಬ ಪ್ರಸರದೊಳು ಲೋಕವನು ಗುರಿಮಾಡಿಯೆ; ಅಸನ ವ್ಯಸನ ನಿದ್ರೆ ಆಲಸ್ಯ ಮಾಯಾತನು ಬೆಸುಗೆಯೊಳು ಸಿಲ್ಕಿ ಬರಿದೆ. | 3 | ಹಿರಿದು ಮಾಯಾತಮವೆಂಬ ಕತ್ತಲೆಯೊಳಗೆ ನಡೆದು ಬರುತಲಿ ಅಜ್ಞಾನವೆಂದೆಂಬುವ ಕೊರಡನೆಡವಿಯೆ ತಾಪತ್ರಯದಗ್ನಿಗಿರಿಯೊಳಗೆ ಮರೆಗೊಂಡು ಮುಂದುಗಾಣದೆ ಮೂಲೋಕ | 4 | ಸುರೆಗುಡಿದ ಮರ್ಕಟಗೆ ವಿರಚಿ ಭೂತಂ ಸೋಂಕಿ ಹಿರಿದು ಚೇಷ್ಟೆಯ ತೆರದಿ ಮಾಯಾಮದದ ಗುರುವಹಂಕಾರ ಮನ ಚೇಷ್ಟೆಯಂಗಳ ತೊರದು ಗುರುಸಿದ್ಧ ಮಲ್ಲಿನಾಥನೊಳು ಬೆರೆಯಲರಿಯದೆ. | 5 |