Index   ವಚನ - 90    Search  
 
ಬಸುರಿಲ್ಲದ ಬಯಕೆ ಇದೆತ್ತಣದೊ ! ಶಿಶುವಿಲ್ಲದ ಜೋಗುಳ ತೊಟ್ಟಿಲು ತೂಗುವುದಿದೇನೊ! ಆಸವಲ್ಲದ ಹೊಳೆಯ ಅಂಬಿಗನ ಹುಟ್ಟುನುಂಗಿ, ಶಶಿಯಿದ್ದ ಗಗನ ಬಿಸಿಯಾಗಿಪ್ಪುದಿದೇನೊ! ಮಸಣವ ನುಂಗಿದ ಹೆಣ, ವಿಷವ ನುಂಗಿದ ಸರ್ಪನೊ! ಕೃಷಿ ಹೊಲನ ನುಂಗಿ, ಬೀಜಕೆ ನೆಲೆಯಿಲ್ಲ . ಆಸವಲ್ಲದ ಕೊಟ್ಟವ ಬೇಡನ ಬಲೆ ನುಂಗಿ ಎಸೆವುದಿದೇನು ಚೋದ್ಯ ಹೇಳಾ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.