Index   ವಚನ - 93    Search  
 
ಕುಲ ಛಲ ರೂಪ ಯೌವ್ವನ ವಿದ್ಯೆ ಧನ ರಾಜ್ಯ ತಪಮದವೆಂಬ ಅಷ್ಟಮದಂಗಳ ಬಹಿರಂಗದಲ್ಲಿ ನೆನೆದು ಬರಿದೆ ಭ್ರಮೆಗೆ ಸಿಲ್ಕಿ ಬಳಲುತ್ತಿಪ್ಪರಯ್ಯ. ಅದು ಎಂತೆಂದಡೆ: ಅಂಧಕನ ಮುಂದಣ ಬಟ್ಟೆಯಂತೆ, ಹುಚ್ಚಾನೆಯ ಮುಂದಣ ಭಿತ್ತಿಯಂತೆ, ಎನ್ನ ಅನ್ಯೋನ್ಯದ ಬಾಳುವೆಗೆ ಗುರಿಮಾಡಿ ಎನ್ನ ಕಾಡುತಿದ್ದೆಯಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.