Index   ವಚನ - 146    Search  
 
ಮನವಿಕಾರ ಸುಟ್ಟದನು ಮನವಿಕಾರದ ಭ್ರಮೆಯ ಹೋರಟೆಯಾಗದೆಂ ಬನುವಿನಿಂ ತ್ರಿಲೋಕಯೆಲ್ಲ ಭಂಗಿತರಾಗಿ ಜನನ ಮರಣಕೆ ಬರುವ ಮನವು ನಿರ್ಮನವಾಗಲವ ಸತ್ಯ ನಿತ್ಯ ಶರಣ. ಹರಿದು ಮರ್ಕಟನ ವಿಕಾರಕಿಂದಲಿ ಮೇಣು ಸುರೆ ಸವಿದವನ ವಿಕಾರವದರಿಂದ ಧ ತ್ತುರಿಯ ಸೇವಿಸಿದವನ ವಿಕಾರಯಿವು ತ್ರಿವಿಧಕೆ ಗೌರವಂ ಮನವಿಕಾರ ಚರಿಯ ಮದದ ಅಮಲು ತಲೆಗೇರಿ ತಾಮಸದಲಿಂ ಗಿರಿಯಂಧಕನವೋಲಿನಂತೆ ದೇವತಾ ಸತ್ಯ ಪುರುಷರುಂ ಶಿವಜ್ಞಾನ ಹೊಲಬನರಿಯದೆ ಕೆಟ್ಟುದನೇನ ಹೊಗಳ್ವೆ ನಾನು |1| ಹರಿಯ ಮುಂದುಗೆಡಿಸಿ ಅಜನ ಶಿರವ ಕಳೆಸಿ ಸುರನ ಮೈಯೋನಿಯಂ ಮಾಡಿ ದೇವರ್ಕಳಂ ನೆರೆ ಕೆಡಿಸಿ ಯತಿ ಸಿದ್ಧಸಾಧ್ಯರೆಲ್ಲರ ಸೆರೆಯ ಹಿಡಿದು ಭಂಗಿತರ ಮಾಡಿ ಧರೆಯ ಮನುಜರ ತಿಂದು ತೇಗಿ ಕಾಡುವ ಮನವ ನಿರಸನಮಾಡಿ ನಿರ್ಮೋಹಿಯಾಗಿಹ ಸತ್ಯ ಶರಣರಡಿಧೂಳಿಯ ಚಮ್ಮಾವುಗೆಯ ಪೊರೆವೆನೆನಗಿದೆ ಸತ್ಯ ಮುಕ್ತಿ ಕಂಡಾ |2| ಇಳೆಪತಿಗೆ ಮಂತ್ರಿ ತಾ ಮುಖ್ಯವಾದಂತೆ ಕಾಯ ದೊಳು ಚರಿಸುವ ಜೀವ ಪ್ರಾಣದ್ವಯ ದಶವಾಯು ಗಳು ಅಷ್ಟಮದ ಸಪ್ತವ್ಯಸನ ಅರಿವರ್ಗ ಚತುರಂತಃಕರಣವಿಷ್ಟೆಲ್ಲಕೆ ಸಲೆ ಮನಂ ಮುಖ್ಯವಾಗಿಯೂ ಪಾಪ ಅನ್ಯಾಯವ ಗಳಿಸಿ ಯಮನಿಂಗೆ ಗುರಿಮಾಡಿ ಬಂಧಿಸಿ ಜನರ ಕೊಲ್ಲಿಸುತಿಹ ವಿಧಿಗಂಜಿ ನಿಮ್ಮ ಮೊರೆಹೊಕ್ಕೆನೆಲೆ ಕಾಯೋ ಶಂಭುವೆ. |3| ಚಣಚಣಕ್ಕೆ ಪಾತಾಳಲೋಕಕೈದುವ ಮನಂ ಚಣಚಣಕ್ಕೆ ಆಕಾಶದತ್ತ ಹಾರುವ ಮನಂ ಚಣಚಣಕ್ಕೆ ಸಪ್ತಸಮುದ್ರವ ಚರಿಸಿಬರುವುದೀ ಮನಮರುತ ಸರ್ವಾಂಗದಿ ಚಣಕೊಂದು ಬುದ್ಧಿಯ ನೆನದು ಕಾಡುವ ಮನದ ಗುಣದಿಂದ ನಾ ಕರ್ಮಶರಧಿಯೊಳು ಮುಣಗಿದೆನು ತ್ರಿಣಯ ನೀ ಕೈವಿಡಿದು ತೆಗೆದು ರಕ್ಷಿಸು ಎನ್ನ ಕರುಣಾಳು ದುರಿತಹರನೆ |4| ಮನದಿಂದೆ ನೊಂದೆ ನಾ ಮನದಿಂದೆ ಬೆಂದೆ ನಾ ಮನದಿಂದ ಕಂದಿ ಕುಂದಿಯೆ ಕುಸಿದು ಭವಗಿರಿಯ ನನುದಿನಂ ಸುತ್ತುತಿರ್ದೆನು ಅಂಧಕನ ತೆರದಿ ಮನದ ನಸು ಗುನ್ನಿ ಚುರಿಚಿತನವು ಸರ್ವಾಂಗವೆಲ್ಲವ ಕೊಂಡು ತಿನಿಸೆದ್ದು ಮನದ ಗಂಧೆಯ ತುರಿಸಿ ತುರಿಸನೇ ಹಂಬಲಿಸಿ ಕನಲುತಿರ್ದೆನು ಎನ್ನ ಗುಣವ ನೋಡದೆ ಕಾಯೋ ಕಾಯೋ ಕರುಣಾಳುವೆ |5| ಪಾಪಿಮನ ಠಕ್ಕಮನ ಸರ್ವರೊಳು ಕೋಪಿಮನ ಕುಕ್ಕಮನ ಕಾಕುಮನ ಜಾಪಿಮನ ಹೇವಮನ ಹೆಬಗಮನ ಗುಣಧರ್ಮಕರ್ಮದಿಂದ ತಾಪಸಬಡುತಿದೆ ಗಾಯವಡೆದ ಉರಗ ನಾಪರಿಯಲೆನ್ನ ನೆರಳಿಸಿ ಒರಲಿಸುವ ಮನದ ರೂಪನಳಿದು ಜ್ಞಾನವಿತ್ತು ಸಲವಯ್ಯಾ ಚಿದ್ರೂಪ ಚಿನ್ಮಯ ಶಂಭುವೆ. |6| ಕೂಳಮನ ಕುರಿಮನ ಸರ್ವಚಾಂ- ಡಾಲಿಮನ ಪರಧನ ಪರಸ್ತ್ರೀಯರನ್ಯಕ್ಕೆ ಕೋಳುಗೊಂಬುವ ಹೆಡ್ಡಮನ ಜಿಡ್ಡುಮನ ಜಾಳುಮನ ಹಾಳುಮನದ ಪಾಳೆಯವು ಹಲವು ಪರಿಯ ಮನದ ಗಾಲಿಗೆ ಸಿಲ್ಕಿ ಕಾಲಕರ್ಮಕ್ಕೆ ಗುರಿಯಾದೆನಿದ ಪರಿಹರಿಸಿ ಶೂಲಿ ಸರಸಿಜನ ಕಪಾಲಿ ಶಿರಮಾಲಿ ರಕ್ಷಿಸು ಕರುಣಾಂಬುನಿಧಿ ಗಿರಿಜೇಶನೆ |7| ಅಂಗಗೂಡಿನೊಳು ಮನಪಕ್ಷಿ ಹೊರಗಿರುವ ಪ ಕ್ಕಂಗಳೆರಡರೊಳು ಉಡುಪತಿ ಭಾನುವಂ ಪಿಡಿದು ಜಂಗಿಟ್ಟು ಭೂಯ್ಯೋಮ ಮಧ್ಯದೊಳು ಚರಿಸುತಿರಲೆತಿ ಸಿದ್ಧ ಸಾಧ್ಯರೆಲ್ಲ ಭಂಗಬಡುವರು ಮನವೆಂಬ ಪಕ್ಷಿಯ ಮುರಿದು ನುಂಗಬಲ್ಲಡೆ ಸತ್ಯಶಿವಯೋಗಿ ಶರಣ ನಿ ರ್ಭಂಗ ನಿರ್ಲೇಪ ನಿರ್ಮನ ನಿರಾಭಾರಿಯಾಗಿಹರೆನ್ನ ಪ್ರಾಣಲಿಂಗ. |8| ಹರನ ಶ್ರೀಪಾದದೊಳು ಮನವನಿಟ್ಟಿಹ ಸತ್ಯ ಶರಣಬಸವೇಶ ಪ್ರಭುರಾಯ ಮೋಳಿಗೆ ಮಾರ ಗುರುಭಕ್ತ ನೆಂಬಣ್ಣ ದಾಸಿ ಕೇಶಯ್ಯನೋಹಿಲದೇವನುದುಭಟಯ್ಯ ಮರುಳಶಂಕರ ಮುಖ್ಯವಾದ ಪ್ರಮಥರ ದಿವ್ಯ ಚರಣದಲಿ ಮನವ ಮಗ್ನಿಸಿದ ದಾಸೋಹಿಗಳ ವರಪ್ರಸಾದಕ್ಕೆ ಯೋಗ್ಯನ ಮಾಡು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ. |9|