Index   ವಚನ - 158    Search  
 
ಕೊಡುವವ ಮಾನವನೆಂದು ಒಡಲಾಸೆಯ ತೋರದಿರು, ಕೊಡುವವ ಮಾನವನಲ್ಲ. ಕೊಡುವವ ಕೊಂಬುವವ ಮಾನವರ ನಡುವಿಪ್ಪ ಮಹಾತ್ಮ ಸಂಜೀವಂಗೆ ಒಡಲಾಸೆ ತೋರಿ ಬೇಡಿಕೊ. ಜೀವನ ಬುದ್ಧಿಯಿಂದ ನರನನಾಸೆಗೈಯದಿರು. ಆಸೆಗೈದರೆ ಕಾವವರಲ್ಲ, ಕೊಲ್ಲುವವರೂ ಅಲ್ಲ, ಕೊಡುವವರೂ ಅಲ್ಲ, ಬಿಡುವವರೂ ಅಲ್ಲ. ನಾಯ ಬಾಲವ ನಂಬಿ ಹೊಳೆಯ ಹಾದವರುಂಟೇ? ವೃಷಭನ ಬಾಲವ ಪಿಡಿದರೆ ನದಿಯ ತಡಿಯ ಸೇರುವರಲ್ಲದೆ. ನಂಬು ನಂಬು ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲನೆಂಬ ಮಹಾಭಾಗ್ಯವ ನಂಬಿದರೆ ನಿನಗೆ ಬಡತನವೆ ಆತ್ಮ?