Index   ವಚನ - 170    Search  
 
ಆಸತ್ತೆ ಸಂಸಾರಸಂಗಕ್ಕೆ, ಬೇಸತ್ತೆ ಸಂಸಾರಸಂಗಕ್ಕೆ. ಸಂಸಾರಸಂಗದಿಂದ ಓಸರಿಸಿ ಒಯ್ಯನೆ ಕಂದಿ ಕುಂದಿ, ಭವಗಿರಿಯ ಸುತ್ತುತ್ತಿದ್ದೆನಯ್ಯಾ. ಅಯ್ಯಾ, ಅಯ್ಯಾ ಎಂದು ಒಯ್ಯನೆ ಒದರಿದರೆ `ಓ' ಎನ್ನಲೊಲ್ಲೇಕೆಲೊ ಅಯ್ಯ? ನೀ ಪಡೆದ ಸಂಸಾರ ಸುಖ ದುಃಖ, ನೀನೆ ಬೇಗೆಯನಿಕ್ಕಿ, ನೀನೊಲ್ಲೆನೆಂದರೆ ನಾ ಬಿಡೆ, ನಾ ಬಿಡೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.