Index   ವಚನ - 213    Search  
 
ಪುರುಷನಿಂದ ಸತಿ ಹಿರಿಯಳಾದರೂ ಆಗಲಿ, ಹಸೆಹಂದರವನಿಕ್ಕಿ ಮದುವೆಯ ಮಾಡಿದ ಮೇಲೆ ಪುರುಷನಿಂದ ಕಿರಿಯಳು ನೋಡಾ. ಗುರುವಿಗಿಂದ ಶಿಷ್ಯ ಅರುಹುಳ್ಳಾತನಾದರೂ ಆಗಲಿ, ಶಿಷ್ಯನ ಭಾವಕ್ಕೆ ಗುರು ಅಧಿಕ ನೋಡಾ. ನಾನರುಹುಳ್ಳಾತ, ಗುರುವಿಗರುಹುವಿಲ್ಲೆಂದು ಜರೆದು ನುಡಿವ ನುಡಿ ಅಂಗದೊಳು ಹೊಳೆದರೆ ಕುಂಭಿನಿಯ ಪಾಪದೊಳಿಕ್ಕುವ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.