Index   ವಚನ - 214    Search  
 
ಗುರುವಿನಲ್ಲಿ ಗುಣ ವಿದ್ಯೆ ಕುಲ ಬಾಲ್ಯ ಯೌವನ ವೃದ್ಧನೆಂದು ಅರಸಲುಂಟೇ? ಅರಸಿದರೆ ಮಹಾಪಾತಕ. ಸಾಕ್ಷಿ: ಆಚಾರ್ಯೇ ಬಾಲಬುದ್ಧಿಶ್ಚ ನರಬುದ್ಧಿಸ್ತಥೈವ ಚ | ಅಸಿಷ್ಟ ಬುದ್ಧಿಭಾವೇನ ರೌರವಂ ನರಕಂ ವ್ರಜೇತ್ || '' ಎಂದುದಾಗಿ, ಎನ್ನ ಗುರು ಬಾಲನೂ ಅಲ್ಲ, ಯೌವನನೂ ಅಲ್ಲ, ವೃದ್ಧನೂ ಅಲ್ಲ. ಮೃತರಹಿತ ಪರಶಿವ. ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆಂಬ ಗುರುವ ಮರೆದವರಿಗೆ ಇದೇ ನರಕ.